ಶಿವಮೊಗ್ಗದ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ವಿಧ್ಯುಕ್ತವಾಗಿ ಆರಂಭಗೊಂಡ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ‘ವಂದೇ ಮಾತರಂ’ ಗೀತೆ ಗಾಯನದ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮದ ಆರಂಭದಲ್ಲಿ ಗೀತೆಯನ್ನು ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ವೇದಿಕೆಯಿಂದ ಹೊರನಡೆದ ಘಟನೆ ನಡೆದಿದ್ದು, ಇದಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ
ಘಟನೆಯ ಹಿನ್ನೆಲೆ ಏನು?
ನಾಡಹಬ್ಬ ಶಿವಮೊಗ್ಗ ದಸರಾ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮದ ಆರಂಭದಲ್ಲಿ ಗಾಯಕರು ‘ವಂದೇ ಮಾತರಂ’ ಗೀತೆಯನ್ನು ಹಾಡಲು ಆರಂಭಿಸಿದರು.
ಸರ್ಕಾರದ ಸುತ್ತೋಲೆಯ ಪ್ರಕಾರ ನಿಗದಿತ ಚರಣಗಳ ಬದಲಿಗೆ ಸಂಪೂರ್ಣ ಗೀತೆಯನ್ನು ಮುಂದುವರಿಸಲಾಯಿತು ಎಂಬ ಕಾರಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಸಿ. ಯೋಗೇಶ್, ಸೂಡಾ ಅಧ್ಯಕ್ಷ ಸಿ.ಜೆ. ಮಧುಸೂದನ್ ಹಾಗೂ ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ ನೇತೃತ್ವದ ಕಾಂಗ್ರೆಸ್ ನಿಯೋಗವು ಮಹಾನಗರ ಪಾಲಿಕೆ ಆಯುಕ್ತರ ನಡೆಗೆ ಅಸಮಾಧಾನ ವ್ಯಕ್ತಪಡಿಸಿ, ವೇದಿಕೆಯಿಂದ ನಿರ್ಗಮಿಸಿತು. "ನಾವು ದಸರಾ ಉತ್ಸವದ ವಿರೋಧಿಗಳಲ್ಲ, ಆದರೆ ಅಧಿಕೃತ ಸುತ್ತೋಲೆ ನಿಯಮಗಳನ್ನು ಪಾಲಿಸದ ಕಾರಣಕ್ಕೆ ವೇದಿಕೆಯಿಂದ ಹೊರಬಂದಿದ್ದೇವೆ" ಎಂದು ಕಾಂಗ್ರೆಸ್ ಮುಖಂಡರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.
ಮಾಧ್ಯಮಗಳ ಮುಂದೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು?
ಈ ವಿದ್ಯಮಾನದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದ ಬಿ.ವೈ. ರಾಘವೇಂದ್ರ ಅವರು
ವಂದೇ ಮಾತರಂ ಗೀತೆಯ ವಿಚಾರದಲ್ಲಿ ಪದೇ ಪದೇ ನಮ್ಮ ರಾಜ್ಯದಲ್ಲಿ ಚರ್ಚೆ ಆಗುತ್ತಿರುವುದು ಯಾಕೆ? ಯಾವುದೇ ಅನಗತ್ಯ ವಿವಾದ ಸೃಷ್ಟಿಯಾಗಬಾರದು
ಇದು ಯಾವುದೇ ವ್ಯಕ್ತಿ ಅಥವಾ ಸರ್ಕಾರದ ವಿರುದ್ಧದ ವಿಷಯವಲ್ಲ
ಸಾರ್ವಜನಿಕರ ಅಪೇಕ್ಷೆಯಂತೆ ನಡೆದ ಈ ಗಾಯನದ ವೇಳೆ ವೇದಿಕೆಯಿಂದ ನಿರ್ಗಮಿಸಿದ್ದು ನಿರೀಕ್ಷಿತವಲ್ಲ. ಸಾರ್ವಜನಿಕರು ಹೃದಯಪೂರ್ವಕವಾಗಿ ಹಾಡಿದಾಗ ಯಾರೂ ಅದನ್ನು ತಡೆಯಲು ಸಾಧ್ಯವಿಲ್ಲ, ನಾವೆಲ್ಲರೂ ಒಟ್ಟಾಗಿ ಸಾಮೂಹಿಕವಾಗಿ ಹಾಡಿದ್ದೇವೆ. ಮುಂದಿನ ದಿನಗಳಲ್ಲಾದರೂ ಎಲ್ಲರೂ ಒಗ್ಗೂಡಿ ನಾಡಹಬ್ಬವನ್ನು ಯಶಸ್ವಿಗೊಳಿಸಲಿ ಎಂದು ಅವರು ಅಭಿಪ್ರಾಯಪಟ್ಟರು.
ನಾಡಹಬ್ಬ ದಸರಾವು ನಾಡಿನ ಕಲೆ, ಸಾಂಸ್ಕೃತಿಕ ಪರಂಪರೆ ಮತ್ತು ಜನರ ಸೌಹಾರ್ದತೆಯ ಪ್ರತೀಕ

.jpg)
0 ಕಾಮೆಂಟ್‌ಗಳು